Thursday, December 31, 2015

KANNADA BIBLE ILLUSTRATION - PARABLE OF SOWER




ಆತನು ಪ್ರತಿಯೊಂದು ಪಟ್ಟಣಕ್ಕೂ ಹಳ್ಳಿಗೂ ಎಲ್ಲಾ ಕಡೆಯಲ್ಲಿ ಹೋಗಿ ದೇವರರಾಜ್ಯದ ಸಂತೋಷಸಮಾಚಾರವನ್ನು ಸಾರಿ ತಿಳಿಸುತ್ತಿದ್ದನು




ಆಗ ಪ್ರತಿಯೊಂದು ಪಟ್ಟಣದಿಂದ ಬಹು ಜನರು ಆತನ ಬಳಿಗೆ ಒಟ್ಟಾಗಿ ಸೇರಿ ಬರಲು ಆತನು ಒಂದು ಸಾಮ್ಯದಿಂದ




ಬಿತ್ತುವವನು ಬೀಜವನ್ನು ಬಿತ್ತುವದಕ್ಕಾಗಿ ಹೊರಟು ಹೋದನು. ಅವನು ಬಿತ್ತಿದಾಗ ಕೆಲವು ದಾರಿಯ ಮಗ್ಗುಲಲ್ಲಿ ಬಿದ್ದು ತುಳಿಯಲ್ಪಟ್ಟವು; ಆಕಾಶದ ಪಕ್ಷಿಗಳು ಅವುಗಳನ್ನು ನುಂಗಿಬಿಟ್ಟವು.




ಇದಲ್ಲದೆ ಕೆಲವು ಬಂಡೆಯ ಮೇಲೆ ಬಿದ್ದವು; ಮೊಳೆತ ಕೂಡಲೆ ತ್ಯಾವ ಇಲ್ಲದಿರುವ ಕಾರಣ ಒಣಗಿಹೋದವು.



ಕೆಲವು ಮುಳ್ಳುಗಳ ಮಧ್ಯದಲ್ಲಿ ಬಿದ್ದವು; ಆಗ ಮುಳ್ಳುಗಳು ಅವುಗಳೊಂದಿಗೆ ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು




ಕೆಲವು ಒಳ್ಳೇ ನೆಲದ ಮೇಲೆ ಬಿದ್ದವು; ಆಗ ಅವು ಬೆಳೆದು ನೂರರಷ್ಟು ಫಲಕೊಟ್ಟವು.




ಇವುಗಳನ್ನು ಆತನು ಹೇಳಿ--ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಎಂದು ಕೂಗಿ ಹೇಳಿದನು.



ಆತನ ಶಿಷ್ಯರು ಆತ ನನ್ನು--ಈ ಸಾಮ್ಯವು ಏನಾಗಿರಬಹುದು ಎಂದು ಕೇಳಿದರು




ಅದಕ್ಕೆ ಆತನು--ದೇವರರಾಜ್ಯದ ಮರ್ಮಗಳನ್ನು ತಿಳುಕೊಳ್ಳುವದಕ್ಕೆ ನಿಮಗೆ ಕೊಡಲ್ಪಟ್ಟಿದೆ.




ಆದರೆ ಉಳಿದವರಿಗೆ ಅವರು ನೋಡಿದರೂ ಕಾಣದಂತೆ ಮತ್ತು ಕೇಳಿದರೂ ಗ್ರಹಿಸದಂತೆ ಸಾಮ್ಯ ಗಳಲ್ಲಿ ಕೊಡಲ್ಪಟ್ಟಿದೆ




ಆ ಸಾಮ್ಯವು ಇದೇ; ಬೀಜವು ದೇವರ ವಾಕ್ಯವೇ ವಾಕ್ಯವನ್ನು ಕೇಳಿದವರು ನಂಬಿ ರಕ್ಷಣೆಹೊಂದಿಕೊಳ್ಳದಂತೆ ಸೈತಾನನು ಬಂದು ಅವರ ಹೃದಯದೊಳಗಿಂದ ಆ ವಾಕ್ಯವನ್ನು ತೆಗೆದು ಬಿಡುವನು. ಇವರೇ ಆ ದಾರಿಯ ಮಗ್ಗುಲಾಗಿ ರುವವರು.



ಬಂಡೆಯ ನೆಲದವರು ಯಾರಂದರೆ, ಅವರು ವಾಕ್ಯವನ್ನು ಕೇಳಿದಾಗ ಸಂತೋಷದಿಂದ ಅಂಗೀಕರಿಸುವರು; ಇವರು ಬೇರಿಲ್ಲದಿರುವದರಿಂದ ಸ್ವಲ್ಪಕಾಲ ನಂಬಿ ಶೋಧನೆ ಬಂದಾಗ ಬಿದ್ದು ಹೋಗುವರು

ಮುಳ್ಳುಗಳ ಮಧ್ಯದಲ್ಲಿ ಬಿದ್ದ ಬೀಜದವರು ಯಾರಂದರೆ ಅವರು ಕೇಳಿದ ಮೇಲೆ ಮುಂದರಿದು ಈ ಜೀವನದ ಚಿಂತೆಗಳಿಂದಲೂ ಐಶ್ವರ್ಯಗಳಿಂದಲೂ ಭೋಗಗಳಿಂದಲೂ ಅಡಗಿಸ ಲ್ಪಟ್ಟು ಪರಿಪೂರ್ಣವಾಗಿ ಫಲಿಸದವರು.




ಆದರೆ ಒಳ್ಳೇ ಭೂಮಿಯವರು ಯಾರಂದರೆ ಯಥಾರ್ಥವಾದ ಒಳ್ಳೇ ಹೃದಯದಿಂದ ವಾಕ್ಯವನ್ನು ಕೇಳಿ ಅದನು ಕೈಕೊಂಡು ತಾಳ್ಮೆಯಿಂದ ಫಲಿಸುವವರೇ.