Wednesday, February 3, 2016

KANNADA BIBLE ILLUSTRATION - PARABLE OF THE UNFORGIVING SERVANT

 ತರುವಾಯ ಪೇತ್ರನು ಆತನ ಬಳಿಗೆ ಬಂದು--ಕರ್ತನೇ, ನನ್ನ ಸಹೋದರನು ನನಗೆ ವಿರೋಧ ವಾಗಿ ಪಾಪಮಾಡಿದರೆ ನಾನು ಎಷ್ಟು ಸಾರಿ ಅವನಿಗೆ ಕ್ಷಮಿಸಬೇಕು? ಏಳು ಸಾರಿಯೋ ಎಂದು ಕೇಳಿದನು.

 ಯೇಸು ಅವನಿಗೆ--ಏಳು ಸಾರಿಯಲ್ಲ, ಆದರೆ ಏಳೆಪ್ಪತ್ತು ಸಾರಿ ಎಂದು ನಾನು ನಿನಗೆ ಹೇಳುತ್ತೇನೆ;

ಒಬ್ಬ ಅರಸನು ಅವನು ಲೆಕ್ಕವನ್ನು ತಕ್ಕೊಳ್ಳಲು ಪ್ರಾರಂಭಿಸಿದಾಗ ಹತ್ತು ಸಾವಿರ ತಲಾಂತುಗಳನ್ನು ಸಾಲ ಕೊಡಬೇಕಾದವನನ್ನು ಅವನ ಬಳಿಗೆ ತಂದರು.  ಆದರೆ ಕೊಡುವದಕ್ಕೆ ಅವನಿಗೆ ಏನೂ ಇಲ್ಲದ್ದರಿಂದ ಅವನನ್ನೂ ಅವನ ಹೆಂಡತಿಯನ್ನೂ ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಸಾಲ ತೀರಿಸಬೇಕೆಂದು ಅವನ ಯಜಮಾನನು ಅಪ್ಪಣೆ ಕೊಟ್ಟನು.


 ಆಗ ಆ ಸೇವಕನು ನೆಲಕ್ಕೆ ಬಿದ್ದು ಅವನನ್ನು ವಂದಿಸಿ--ಧಣಿಯೇ, ನನ್ನನ್ನು ತಾಳಿಕೋ; ನಾನು ಎಲ್ಲವನ್ನು ನಿನಗೆ ಸಲ್ಲಿಸುವೆನು ಎಂದು ಹೇಳಿದನು.

 ಆ ಸೇವಕನ ಧಣಿಯು ಅವನ ಮೇಲೆ ಕನಿಕರಪಟ್ಟು ಅವನನ್ನು ಬಿಡಿಸಿ ಅವನ ಸಾಲವನ್ನೆಲ್ಲಾ ಬಿಟ್ಟು ಬಿಟ್ಟನು.

ಆದರೆ ಅದೇ ಸೇವಕನು ಹೊರಗೆ ಹೋಗಿ ತನಗೆ ನೂರು ದೇನಾರುಗಳನ್ನು ಸಾಲ ಕೊಡಬೇಕಾಗಿದ್ದ

ಅವನನ್ನು ಹಿಡಿದು ಕುತ್ತಿಗೆ ಹಿಸುಕಿ--ನನ್ನ ಸಾಲವನ್ನು ತೀರಿಸು ಅಂದನು,  ಅವನ ಪಾದಕ್ಕೆ ಬಿದ್ದು ಅವನಿಗೆ--ನನ್ನನ್ನು ತಾಳಿಕೋ; ನಾನು ನಿನ್ನದನ್ನೆಲ್ಲಾ ತೀರಿಸುತ್ತೇನೆ ಎಂದು ಅವನನ್ನು ಬೇಡಿಕೊಂಡನು.

 ಅವನು ಅದಕ್ಕೆ ಒಪ್ಪದೆ ಹೊರಟುಹೋಗಿ ತನ್ನ ಸಾಲವನ್ನು ತೀರಿಸುವ ವರೆಗೆ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು.

 ಹೀಗೆ ಅವನ ಜೊತೆ ಸೇವಕರು ನಡೆದದ್ದನ್ನು ನೋಡಿ ಬಹಳ ವ್ಯಥೆಪಟ್ಟು ಹೋಗಿ ತಮ್ಮ ಧಣಿಗೆ ನಡೆದದ್ದೆಲ್ಲವನ್ನು ತಿಳಿಯಪಡಿಸಿದರು.

 ಆಗ ಅವನ ಧಣಿಯು ಅವನನ್ನು ತನ್ನ ಬಳಿಗೆ ಕರೆದು ಅವನಿಗೆ--ಓ ದುಷ್ಟ ಸೇವಕನೇ, ನೀನು ನನ್ನನ್ನು ಬೇಡಿಕೊಂಡದ್ದರಿಂದ ನಾನು ನಿನ್ನ ಸಾಲವನ್ನೆಲಾ ಮನ್ನಿಸಿದೆನು.  ನಾನು ನಿನ್ನ ಮೇಲೆ ಕರುಣೆ ತೋರಿಸಿದಂತೆಯೇ ನೀನು ಸಹ ನಿನ್ನ ಜೊತೇ ಸೇವಕನ ಮೇಲೆ ಕರುಣೆಯನ್ನು ತೋರಿಸಬೇಕಾಗಿತ್ತಲ್ಲವೇ ಎಂದು ಹೇಳಿದನು.
 ಅವನ ಧಣಿಯು ಕೋಪಗೊಂಡು ತನಗೆ ಕೊಡಬೇಕಾದ ಸಾಲವನ್ನೆಲ್ಲಾ ತೀರಿಸುವ ತನಕ ಅವನನ್ನು ಸಂಕಟಪಡಿಸುವವರಿಗೆ ಒಪ್ಪಿಸಿದನು.

 ಅದರಂತೆಯೇ ನಿಮ್ಮಲ್ಲಿ ಪ್ರತಿಯೊಬ್ಬನು ಹೃದಯಪೂರ್ವಕವಾಗಿ ತನ್ನ ಸಹೋದರನ ತಪ್ಪುಗಳನ್ನು ಕ್ಷಮಿಸದೆಹೋದರೆ ಪರಲೋಕದಲ್ಲಿರುವ ನನ್ನ ತಂದೆಯೂ ನಿಮಗೆ ಹಾಗೆಯೇ ಮಾಡುವನು ಅಂದನು.


No comments:

Post a Comment